ಬೆಂಗಳೂರು : ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ರೇಣುಕಾಚಾರ್ಯ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ರೇಣುಕಾಚಾರ್ಯ ಅವರು ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಜಮೀರ್ ಒಬ್ಬ ಮತಾಂಧ, ದೇಶದ್ರೋಹಿ ಹಾಗೂ ಪಾದರಾಯನಪುರ ಗಲಾಟೆಗೆ ಜಮೀರ್ ಅಹಮ್ಮದ್ ಅವರೇ ಕಾರಣ ಎಂಬ ಹೇಳಿಕೆಯನ್ನು ನೀಡಿದ್ದರು. ರೇಣುಕಾಚಾರ್ಯ ಅವರ ಹೇಳಿಕೆಯಿಂದ ಮಾನನಷ್ಟವಾಗಿದೆ ಎಂದು ಆರೋಪಿಸಿ ಶಾಸಕ ಜಮೀರ್ ಅಹಮ್ಮದ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿ ರೇಣುಕಾಚಾರ್ಯ ಅವರ ವಿರುದ್ಧ ಐಪಿಸಿ ಸೆಕ್ಷನ್ 153-ಎ, 500, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸೂಚನೆ ನೀಡಿದೆ.










