ಶಾಸಕ ಸಿ.ಎಸ್.ಪುಟ್ಟರಾಜು ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ…

60
firstsuddi

ಮಂಡ್ಯ : ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್ ಪುಟ್ಟರಾಜು ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಅಟ್ಟಹಾಸ ಮೆರೆದಿದ್ದಾರೆ.

ಪಾಂಡವಪುರ ಪಟ್ಟಣದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ ಕಲ್ಲು ತೂರಾಟದಿಂದ ಶಾಸಕರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಅಲ್ಲದೆ ಪುಂಡರು ರಸ್ತೆ ಬದಿ ನಿಲ್ಲಿಸಿದ ಕಾರುಗಳ ಗಾಜನ್ನೂ ಕೂಡ ಪುಡಿ ಮಾಡಿದ್ದಾರೆ. ಖಾಸಗಿ ಬಸ್, ಶೋರೂಮ್ ಮೇಲೂ ಕಲ್ಲುತೂರಿದ್ದಾರೆ. ಶಾಸಕ ಸಿ.ಎಸ್.ಪುಟ್ಟರಾಜು ಬರ್ತ್ ಡೇ ಫ್ಲೆಕ್ಸ್ ಹರಿದು ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಪಾಂಡವಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.