ಶಾಸಕ ಸ್ಥಾನಕ್ಕೆ ಎಂ.ಪಿ ಕುಮಾರಸ್ವಾಮಿ ರಾಜೀನಾಮೆ…

83
firstsuddi

ಉತ್ತರ ಕನ್ನಡ : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎಂ.ಪಿ ಕುಮಾರಸ್ವಾಮಿ ಇಂದು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಗೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ಪಕ್ಷದಲ್ಲಿ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದ್ದಾರೆ. ಇದಕ್ಕೆಲ್ಲಾ ಸಿಟಿ ರವಿ ಹಾಗೂ ಪ್ರಾಣೇಶ್ ಕಾರಣ. ಪಕ್ಷದಲ್ಲಿ ಹೀನಾಯವಾಗಿ ನನ್ನನ್ನು ನಡೆಸಿಕೊಂಡಿದ್ದಾರೆ. ಅವರೇ ಜನ ಕಳುಹಿಸಿ, ಅವರೇ ಜಗಳ ಮಾಡಿಸಿ ನನ್ನ ಮೇಲೆ ಕೆಟ್ಟ ಅಭಿಪ್ರಾಯ ಬರುವ ರೀತಿ ಮಾಡಿದರು ಎಂದು ಕುಮಾರಸ್ವಾಮಿ ಅಳಲು ತೋಡಿಕೊಂಡಿದ್ದಾರೆ.

ನನಗೆ ಇನ್ನೂ ವಯಸ್ಸಾಗಿಲ್ಲ, ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ. ಶನಿವಾರ ಸಂಜೆ ವೇಳೆಗೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಬುಧವಾರ ರಾತ್ರಿ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಪಟ್ಟಿಯಲ್ಲಿ ಕುಮಾರಸ್ವಾಮಿ ಬದಲಿಗೆ ಬಿಜೆಪಿ ದೀಪಕ್ ದೊಡ್ಡಯ್ಯ ಅವರಿಗೆ ಈ ಬಾರಿ ಅವಕಾಶ ನೀಡಿದೆ.