ಕೋಲ್ಕತ್ತಾ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಮತ್ತೋರ್ವ ಟಿಎಂಸಿ ಶಾಸಕನನ್ನು ಇಂದು ಬಂಧಿಸಿದೆ.
ಶಿಕ್ಷಕರ ನೇಮಕಾತಿ ಹಗರಣದ ಪ್ರಕರಣದಲ್ಲಿ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ, ಶಾಸಕ ಮಾಣಿಕ್ ಭಟ್ಟಾಚಾರ್ಯ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ತೀವ್ರ ವಿಚಾರಣೆ ನಡೆಸಿ ಇಂದು ಬಂಧಿಸಿದೆ.
ಭಟ್ಟಾಚಾರ್ಯ ಅವರನ್ನು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಆಗಿನ ಶಿಕ್ಷಣ ಸಚಿವರಾಗಿದ್ದ ಪಾರ್ಥ ಚಟರ್ಜಿ ಮತ್ತು ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಇಡಿ ಬಂಧಿಸಿದೆ.










