ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಸಚಿವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೋವಿಡ್-19 ಸೌಮ್ಯ ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್ ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವರು ತಿಳಿಸಿದ್ದಾರೆ.










