ಶಿಗ್ಗಾಂವಿ ಉಪಚುನಾವಣೆ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದ ಅಜ್ಜಂಪೀರ್ ಖಾದ್ರಿ.

31

ಹಾವೇರಿ: ಎಲ್ಲರ ನಿರೀಕ್ಷೆಯಂತೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಅವರು ಸಲ್ಲಿಸಿದ್ದ ನಾಮಪತ್ರ ಹಿಂಪಡೆದಿದ್ದಾರೆ. ಸಚಿವರಾದ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ, ಇಂದು ತಮ್ಮ ನಾಮಪತ್ರ ವಾಪಸ್ ಪಡೆದರು.
ನಾಮಪತ್ರ ಹಿಂಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಜ್ಜಂಪೀರ್ ಖಾದ್ರಿ, ಯಾಸೀರ್ ಖಾನ್ ಮುಖದಲ್ಲಿ ಸಿಎಂ ಸಿದ್ದರಾಮಯ್ಯನವರು ಕಾಣುತ್ತಿದ್ದಾರೆ. ನಾನು ಯಾವುದೇ ಷರತ್ತುಗಳಿಲ್ಲದೇ ನಾಮಪತ್ರ ವಾಪಸ್ ಪಡೆದಿರುವೆ. ನಾನು ಯಾಸೀರ್ ಖಾನ್ ಗೆ ಗುರುವಾಗಿ ಮಾರ್ಗದರ್ಶನ ಮಾಡುತ್ತೇನೆ, ಅವರನ್ನು ಗೆಲ್ಲಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದರು. ಇದೇ ಸಮಯದಲ್ಲಿ ಸಚಿವರಾದ ಜಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ್ ಮಾತನಾಡಿ, ಬಂಡಾಯ ಮುಗಿದ ಅಧ್ಯಾಯ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಶ್ರಮಿಸಬೇಕೆಂದು ಮನವಿ ಮಾಡಿದರು.