ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ಬೊಮ್ಮಾಯಿ ದೂರು.

34

ಶಿಗ್ಗಾವಿ: ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್‍ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಓಪನ್ ಇದೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಪಠಾಣ್ ತನ್ನ ವಿರುದ್ಧ 17-18 ಪ್ರಕರಣಗಳಿವೆ ಎಂದು ಕಳೆದ ವರ್ಷ ಅಫಿಡವಿಟ್‍ನಲ್ಲಿ ಘೋಷಿಸಿದ್ದರು. ಈಗ, ಈ ಪ್ರಕರಣಗಳಲ್ಲಿ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ, ಈತನ ವಿರುದ್ಧ ಇನ್ನೂ ಪ್ರಕರಣಗಳು ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಚುನಾವಣೆ ಮುಂಚೆ ಸೈಯ್ಯದ ಅಜ್ಜಂಪೀರ ಖಾದ್ರಿ ಅವರು ಕಾಂಗ್ರೆಸ್ ಅಭ್ಯರ್ಥಿ ರೌಡಿ ಅಂತ ಹೇಳಿದ್ದರು. ಅವರ ವಿರುದ್ಧ 17 ಕೇಸ್ ಇತ್ತು. ಈ ಪ್ರಕರಣಗಳ ಕುರಿತು ಚುನಾವಣಾಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿದು ಪರಿಶೀಲಿಸಿಲ್ಲ. ಈಗ ಪೊಲೀಸ್ ವರಿಷ್ಠಾಧಿಕಾರಿ ಅವರು ಪ್ರಕರಣ ಇದೆ ಅಂತ ಹೇಳಿದ್ದಾರೆ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ, ಇಂದೇ ಚುನಾವಣಾ ಆಯೋಗಕ್ಕೆ ದೂರು ಕೋಡುತ್ತೇವೆ ಕಾನೂನು ಹೋರಾಟ ಮಾಡುತ್ತೇನೆಂದು ಹೇಳಿದರು.