ಉಡುಪಿ : ಶಿರೂರು ಮಠದ ಆಸ್ತಿ ವಿವಾದ ಹಾಗೂ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆ ದೂರನ್ನು ನಿನ್ನೆ ಹೈಕೋರ್ಟ್ ವಜಾಗೊಳಿಸಿದೆ.
ಶಿರೂರು ಮಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿದ್ದು, ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ. ಹೀಗಾಗಿ ಸೋದೆ ಶ್ರೀ ಹಾಗೂ ಅವರ ಪವರ್ ಆಫ್ ಅಟಾರ್ನಿ ಹೊಂದಿರುವ ರತ್ನಕುಮಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬೃಂದಾವನಸ್ಥ ಶೀರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಹೋದರ ಲಾತವ್ಯ ಆಚಾರ್ಯ ಮಾರ್ಚ್ 24ರಂದು ಹೈಕೋಟ್೯ನಲ್ಲಿ ದಾವೆ ಹೂಡಿದ್ದರು.
ನಿನ್ನೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಪ್ರಕರಣವನ್ನು ವಜಾಗೊಳಿಸಿದ್ದಾರೆ. ಇದೇ ವಿಚಾರವಾಗಿ ದಾಖಲಾಗಿದ್ದ ದೂರನ್ನು ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ರದ್ದುಪಡಿಸಿತ್ತು.










