ಶಿವಮೊಗ್ಗ : ಮಲೆನಾಡಿಗೂ ಐಸಿಸ್ ಉಗ್ರರ ನಂಟು ತಗುಲಿರುವ ಶಂಕೆ ವ್ಯಕ್ತವಾಗುತ್ತಿದೆ. ಐಸಿಸ್ ಜೊತೆ ನಂಟು ಹೊಂದಿದ್ದ ಆರೋಪದಡಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಸಿದ್ದೇಶ್ವರ ನಗರದ ಯಾಸೀನ್, ಮಂಗಳೂರಿನ ಮಾಜ್ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪು ಗುಡ್ಡೆಯ ಶಾರೀಕ್ ಎಂಬಾತ ಪರಾರಿಯಾಗಿದ್ದು, ಆತನ ವಶಕ್ಕೆ ಬಲೆ ಬೀಸಲಾಗಿದೆ. ಯಾಸೀನ್ ಶಿವಮೊಗ್ಗದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ.
ಕಳೆದ ಆಗಸ್ಟ್ 15 ರಲ್ಲಿ ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ನನ್ನು ವಿಚಾರಣೆಗೆ ಒಳಪಡಿಸಿದಾಗ ಈ ಮೂವರ ಜೊತೆ ಸಂಪರ್ಕದಲ್ಲಿರುವ ಬಗ್ಗೆ ಆತನ ಮೊಬೈಲ್ ಫೋನ್ ನಲ್ಲಿ ಪತ್ತೆಯಾಗಿದೆ. ಇದರ ಮೇಲೆ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.










