ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜು ಪುನಾರಂಭ…

68
firstsuddi

ಶಿವಮೊಗ್ಗ : ಒಂದು ವಾರದ ಬಳಿಕ ನಗರದಲ್ಲಿ ಇಂದಿನಿಂದ ಶಾಲಾ-ಕಾಲೇಜು ಪುನಾರಂಭಗೊಂಡಿವೆ.

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡ ಕಾರಣ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಶಾಲಾ-ಕಾಲೇಜು ಬಂದ್ ಮಾಡಲಾಗಿತ್ತು. ಇದೀಗ ನಗರ ಸಹಜ ಸ್ಥಿತಿಗೆ ಮರಳಿದ್ದು, ಇಂದಿನಿಂದ ಶಾಲಾ-ಕಾಲೇಜು ಪುನಾರಂಭಗೊಂಡಿವೆ. ಆದರೆ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಅವಧಿಯಲ್ಲಿ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.