ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ನಿವಾಸದ ಮೇಲೆ ಇಡಿ ದಾಳಿ…

69
firstsuddi

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.

ಡಿಸಿಸಿ ಬ್ಯಾಂಕ್ ನಕಲಿ ಬಂಗಾರ ಅಡಮಾನ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಕಲ್ಲುಕೊಪ್ಪ ಗ್ರಾಮದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಎರಡು ತಿಂಗಳ ಹಿಂದೆ ಅಡಮಾನ ಪ್ರಕರಣದ ಕುರಿತು ಡಿಸಿಸಿ ಬ್ಯಾಂಕ್ ಎಂಡಿಗೆ ಇಡಿ ಮಾಹಿತಿಯನ್ನು ಕೇಳಿತ್ತು. ಸುಮಾರು 15 ಅಧಿಕಾರಿಗಳಿರುವ ತಂಡದಿಂದ ಏಕಕಾಲದಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.