ಶಿವಮೊಗ್ಗ : ನಗರದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಇಂದು ಮೆಗ್ಗನ್ ಆಸ್ಪತ್ರೆಗೆ ಭೇಟಿ ನೀಡಿ ಚಾಕು ಇರಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಅವರ ಆರೋಗ್ಯ ವಿಚಾರಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲ್ಲೆಗೊಳಗಾದ ಪ್ರೇಮ್ ಸಿಂಗ್, ಹಾಗೂ ಗುಂಡೇಟು ತಿಂದ ಮಹಮ್ಮದ್ ಜಬೀವುಲ್ಲಾನಿಂದ ಮಾಹಿತಿ ಪಡೆದಿದ್ದೇನೆ. ಪ್ರೇಮ್ ಸಿಂಗ್ ಅಣ್ಣ ಆತನ ಜೊತೆ ಇದ್ದು ನೋಡಿಕೊಳ್ಳುತ್ತಿದ್ದಾರೆ. ರಾಜಸ್ಥಾನದಲ್ಲಿರುವ ಅವರ ತಂದೆ, ತಾಯಿಗೆ ಮಾಹಿತಿ ನೀಡಲಾಗಿದೆ. ಅವರು ಶಿವಮೊಗ್ಗಕ್ಕೆ ಬರಲಿದ್ದಾರೆ. ಇಬ್ಬರ ಆರೋಗ್ಯವೂ ಸ್ಥಿರವಾಗಿದ್ದು, ಇಲ್ಲೇ ಚಿಕಿತ್ಸೆ ಮುಂದುವರೆಯಲಿದೆ. ಎಎ ಸರ್ಕಲ್ ನಲ್ಲಿ ಫ್ಲೆಕ್ಸ್ ತೆರವು ವೇಳೆ ನಡೆದ ಗಲಭೆಯಲ್ಲಿ ಜಬೀವುಲ್ಲಾ ಪಾಲ್ಗೊಂಡಿದ್ದರು. ಇದೀಗ ಘಟನೆ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಉಳಿದವರವನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದು ಹೇಳಿದ್ದಾರೆ.










