ಶಿವಮೊಗ್ಗ ಗಲಭೆ ಹಿನ್ನಲೆ : ಉಡುಪಿಯಲ್ಲಿ ಪೊಲೀಸ್ ಪಥಸಂಚಲನ…

86
firstsuddi

ಉಡುಪಿ : ಹಿಜಾಬ್ ವಿವಾದ ಮತ್ತು ಶಿವಮೊಗ್ಗದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ನಗರದ ಜೋಡುಕಟ್ಟೆಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಇದರಲ್ಲಿ 90 ಮಂದಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿ ಸೇರಿದಂತೆ 200ಕ್ಕೂ ಅಧಿಕ ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ಪಥಸಂಚಲನ ನಡೆಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ಶಿವಮೊಗ್ಗ ಗಲಭೆ ಹಿನ್ನಲೆಯಲ್ಲಿ ಜನರಲ್ಲಿ ಧೈರ್ಯ ಮೂಡಿಸಲು ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಗುತ್ತಿದೆ. ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಪೊಲೀಸ್ ಇಲಾಖೆ ಸಿದ್ಧವಾಗಿದೆ, ಕಾನೂನು ಸುವ್ಯವಸ್ಥೆ ಗಳ ಬಗ್ಗೆ ಜನರಿಗೆ ಆತಂಕಬೇಡ ಎಂದು ಹೇಳಿದರು.

ಪಥಸಂಚಲನದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ ನಾಯ್ಕ್, ರಾಘವೇಂದ್ರ, ಪಿಐ ರಾಘವೇಂದ್ರ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದರು.