ಶಿವಮೊಗ್ಗ : ವಿಶ್ವ ವಿಖ್ಯಾತ ಜೋಗ ಜಲಪಾತ ಹಾಗೂ ಸುತ್ತಮುತ್ತಲಿನ ನಿಸರ್ಗವನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವೀಕ್ಷಣೆ ಮಾಡಿದ್ದಾರೆ.
ನವೆಂಬರ್.24ರಿಂದ(ನಿನ್ನೆ) ಜಿಲ್ಲೆ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿನ್ನೆ ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ್ದು, ಇಂದು ಜೋಗ ಜಲಪಾತ ವೀಕ್ಷಿಸಿದರು. ಒಟ್ಟಾರೆ ಜಿಲ್ಲೆಯ ಪ್ರವಾಸಿತಾಣಗಳನ್ನು ವೀಕ್ಷಿಸುವ ಜೊತೆ ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತಿದ್ದಾರೆ.










