ಶಿವಮೊಗ್ಗ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ…

50
frstsuddi

ಶಿವಮೊಗ್ಗ: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ.

ಅಧೀಕ್ಷಾ (20) ನೇಣಿಗೆ ಶರಣಾದ ವಿದ್ಯಾರ್ಥಿನಿ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.