ಶಿವಮೊಗ್ಗ : ಹೊಟ್ಟೆನೋವು ತಾಳಲಾರದೇ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿಯಲ್ಲಿ ಘಟನೆ ನಡೆದಿದೆ.
ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸುಚಿತ್ರಾಗೆ ಹಲವು ದಿನಗಳಿಂದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಹೊಟ್ಟೆನೋವು ಗುಣವಾಗಿರಲಿಲ್ಲ. ಪೋಷಕರು ಹೊಲಕ್ಕೆ ಹೋದ ವೇಳೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಗಿದ್ದಾಳೆ ಎನ್ನಲಾಗುತ್ತಿದೆ.
ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










