ಬೆಂಗಳೂರು : ಶುಶೃತಿ ಕೋ ಆಪರೇಟಿವ್ ಬ್ಯಾಂಕ್‌ನಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ನಗರದ 14 ಕಡೆ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆದಿದೆ.
ಐವರು ಎಸಿಪಿ , 14 ಇನ್ಸ್ ಪೆಕ್ಟರ್ ಸೇರಿ 60ಕ್ಕೂ ಹೆಚ್ಚು ಪೊಲೀಸರ ತಂಡದಿಂದ ನಗರದ ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಜಾಲ ಸೇರಿದಂತೆ ನಗರದ ಹಲವೆಡೆ ದಾಳಿ ನಡೆದಿದೆ.
ಹೂಡಿಕೆದಾರರಿಗೆ ವಾಪಸ್ಸು ಹಣ ನೀಡದೇ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಎಲ್ಲಾ ಕೇಸ್ ಗಳನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶುಶೃತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ ಮೂರ್ತಿಯನ್ನು ಬಂಧಿಸಲಾಗಿದೆ.










