2024 ರಲ್ಲಿನ ಅತ್ಯುತ್ತಮ ಕ್ರೀಡಾ ಸಾಧನೆಗಾಗಿ 32 ಕ್ರೀಡಾಪಟುಗಳಿಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಿನ್ನೆ ನಡೆದ ಸಮಾರಂಭದ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್ ಹಾಗೂ ಭಾರತೀಯ ಹಾಕಿ ತಂಡದ ನಾಯಕ ಹರ್ಮನ್‍ಪ್ರೀತ್ ಸಿಂಗ್ ಸೇರಿದಂತೆ ದೇಶದ 32 ಕ್ರೀಡಾಪಟುಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ, ಡಬಲ್ ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್, 2 ಬಾರಿ ಒಲಿಂಪಿಕ್ ಪದಕ ವಿಜೇತ ಮತ್ತು ಪುರುಷರ ಹಾಕಿ ತಂಡ ನಾಯಕ ಹರ್ಮನ್‍ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಹೈಜಂಪರ್ ಪ್ರವೀಣ್ ಕುಮಾರ್ ಅವರು ದೇಶದ ಅತ್ಯುನ್ನತ ಕ್ರೀಡಾ ಗೌರವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇನ್ನು 32 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿ ಸ್ವೀಕರಿಸಿದರೆ, 5 ಜನ ಕೋಚ್ ಗಳಿಗೆ ದೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.










