ಶೌಚಾಲಯದ ಗೋಡೆ ಕುಸಿದು ಮೂವರು ವಿದ್ಯಾರ್ಥಿಗಳು ಸಾವು…

71
firstsuddi

ಚೆನ್ನೈ : ಶಾಲೆಯೊಂದರಲ್ಲಿ ಶೌಚಾಲಯದ ಗೋಡೆ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಶಾಟ್ಫರ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, 8ನೇ ತರಗತಿಯಲ್ಲಿ ಓದುತ್ತಿದ್ದರು. ಈ ಘಟನೆ ನಡೆದಿದ್ದು, ಘಟನೆಯಲ್ಲಿ ಇನ್ನೂ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.