ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಸ್ತಂಗತ…

58
firstsuddi

ಹಾಸನ: ಶ್ರವಣಬೆಳಗೊಳ ಜೈನಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ವಿಧಿವಶರಾಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು 1949ರ ಮೇ 3 ರಂದು ಜನಿಸಿದ್ದರು. ಮೂಲತಃ ಕಾರ್ಕಳದ ವರಂಗ ಗ್ರಾಮದವರಾದ ಶ್ರೀಗಳು 1970 ರಲ್ಲಿ ಜೈನ ಮಠದ ಪೀಠವೇರಿದ್ದರು. ಇತಿಹಾಸ ತಜ್ಞ, ತತ್ವಜ್ಞಾನಿ, ಇತಿಹಾಸ, ಕನ್ನಡ, ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪ್ರಾಕೃತ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.