ಮುಂಬೈ : ಶಾಸಕ ಶ್ರೀಮಂತ್ ಪಾಟೀಲ್ ಅವರು ಎದೆ ನೋವಿನಿಂದ ಮುಂಬೈನ ಸೇಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆ ರಾತ್ರಿ ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಿ ಯಶೋಮತಿ ಅವರು ಶಾಸಕ ಶ್ರೀಮಂತ್ ಪಾಟೀಲ್ ಅವರನ್ನು ಭೇಟಿಯಾಗಲು ಆಸ್ಪತ್ರೆಗೆ ಆಗಮಿಸಿದರು. ಈ ವೇಳೆ ಪೊಲೀಸರು ಶ್ರೀಮಂತ್ ಪಾಟೀಲ್ ಅವರನ್ನು ಭೇಟಿಯಾಗಲು ನಿರಾಕರಿಸಿದ್ದು, ಬಳಿಕ ಯಶೋಮತಿ ಅವರು ವೀಡಿಯೋ ಸಂದೇಶ ಕಳುಹಿಸುವ ಮೂಲಕ ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶ್ರೀಮಂತ್ ಪಾಟೀಲ್ ಅವರು ಎದೆ ನೋವಿಗೆ ಚಿಕಿತ್ಸೆ ಪಡೆಯಲೆಂದು ಸೇಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಈ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಗೆ ವೈದ್ಯರೇ ಇಲ್ಲ. ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಕೆಳಗಿಳಿಸಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿಯವರು ಈ ರೀತಿ ಪಿತೂರಿ ನಡೆಸುತ್ತಿದ್ದಾರೆ. ಶ್ರೀಮಂತ್ ಪಾಟೀಲ್ ಅವರಿಗೆ ಏನೂ ಆಗಿಲ್ಲ. ಶ್ರೀಮಂತ್ ಪಾಟೀಲ್ ಅವರು ಪೊಲೀಸರ ಭದ್ರತೆಯಲ್ಲಿ ಆಸ್ಪತ್ರೆಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.










