ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಕೆಡವಬೇಕೆಂದು ಹೇಳಿಕೆ ನೀಡಿದ್ದ ಕಾಳಿ ಸ್ವಾಮೀಜಿ ಬಂಧನ…

87
firstsuddi

ಮಂಡ್ಯ : ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಕೆಡವಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಸ್ವಾಮೀಜಿಯನ್ನು ಚಿಕ್ಕಮಗಳೂರಿನ ಮಠದಿಂದ ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿ ಕರೆ ತಂದಿದ್ದು, ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಯಿತು. ಸಾಮಾಜಿಕ ಜಾಲಾತಾಣದಲ್ಲಿ ಹಾಕಿರುವ ವಿವಾದಾತ್ಮಕ ಹೇಳಿಕೆಗೆ ಪೊಲೀಸರು ಋಷಿಕುಮಾರ್ ರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ವಾಮೀಜಿ ನಾನು ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಮುಂದೆ ನಿಂತು ಋಷಿಕುಮಾರ ಸ್ವಾಮೀಜಿ ವಿಡಿಯೋ ಮಾಡಿ ಹಿಂದೂಗಳಿಗೆ ಕರೆ ನೀಡಿದ್ದರು. ಅದು ಹಿಂದೂ ದೇವಸ್ಥಾನ, ಆ ಮಸೀದಿಯನ್ನು ಒಡೆದೇ ಒಡೆಯುತ್ತೇವೆ. ಅಲ್ಲಿ ಹನುಮನ ದೇವಸ್ಥಾನ ಕಟ್ಟುತ್ತೇವೆ. ಇದಕ್ಕಾಗಿ ಹಿಂದೂ ಸಂಘಟನೆಗಳು ಒಂದಾಗಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.