ಚಿಕ್ಕಮಗಳೂರು: ಪ್ರತಿ ವರ್ಷದಂತೆ ಈ ವರ್ಷವು ಸಹ ನವೆಂಬರ್ 4 ರಿಂದ ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು ಏಳು ದಿನಗಳ ಕಾಲ ಕಠಿಣ ವ್ರತದಲ್ಲಿದ್ದು, ಕೊನೆಯ ದಿನವಾದ ನವೆಂಬರ್ 10 ರಂದು ಶ್ರೀಗುರುದತ್ತಾತ್ರೇಯ ಬಾಬಾಬುಡನ್‍ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ದತ್ತ ಪೀಠದಲ್ಲಿ ಹೋಮ-ಹವನಗಳು ನಡೆಯಲಿವೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಾಲಾಧಾರಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಾದ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಮತ್ತು ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನವೆಂಬರ್ 9ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
Home ಸ್ಥಳಿಯ ಸುದ್ದಿ ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ: ಪ್ರವಾಸಿಗರು ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ನಿರ್ಬಂಧ.










