ಶ್ರೀರಾಮ ನವಮಿ : ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ …

50
firstsuddi

ನವದೆಹಲಿ: ರಾಮ ನವಮಿ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು. “ನನ್ನ ಎಲ್ಲಾ ದೇಶವಾಸಿಗಳಿಗೆ ಶ್ರೀ ರಾಮ ನವಮಿಯ ಶುಭಾಶಯಗಳು,  ಭಗವಾನ್ ರಾಮನ ಜೀವನವು ತ್ಯಾಗ, ತಪಸ್ಸು, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದೆ, ರಾಮನ ಜೀವನವು ಪ್ರತಿ ಯುಗದಲ್ಲೂ ಸ್ಫೂರ್ತಿಯಾಗಲಿದೆ. ರಾಮನ ನಡವಳಿಕೆ ನಮ್ಮ ಜೀವನದಲ್ಲಿಯೂ ಅಡಕವಾಗಬೇಕು. ದೇವರ ಆಶೀರ್ವಾದ ನಮ್ಮ ಮೇಲಿರಲಿ” ಎಂದು ತಿಳಿಸಿದ್ದಾರೆ.

ಇನ್ನೂ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದೇಶದ ಜನತೆಗೆ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ. “ದೇಶದ ಸಮಸ್ತ ಜನತೆಗೆ ರಾಮ ನವಮಿಯ ಹೃತ್ಪೂರ್ವಕ ಶುಭಾಶಯಗಳು. ಮರ್ಯಾದಾ ಪುರುಷೋತ್ತಮ ಶ್ರೀರಾಮನ ತ್ಯಾಗ ಮತ್ತು ಸೇವೆಯ ಅಮೂಲ್ಯ ಸಂದೇಶವನ್ನು ಈ ಜಗತ್ತಿಗೆ ನೀಡುತ್ತದೆ. ಎಲ್ಲಾ ಭಾರತೀಯರು ಭಗವಾನ್ ರಾಮನ ಉನ್ನತ ಆದರ್ಶಗಳನ್ನು ಮೈಗೂಡಿಸಿಕೊಂಡು ಭವ್ಯ ಭಾರತವನ್ನು ನಿರ್ಮಿಸಲು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಟ್ವೀಟ್ ಮಾಡಿದ್ದಾರೆ.