ಶ್ರೀಲಂಕಾದ ಪ್ರಧಾನಿಯಾಗಿ ರಾನಿಲ್ ವಿಕ್ರಮ ಸಿಂಘೆ ಅಧಿಕಾರ ಸ್ವೀಕಾರ…

43
firstsuddi

ಕೊಲಂಬೊ : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಉಲ್ಭಣಗೊಂಡಿರುವ ಬೆನ್ನಲ್ಲೇ ನೂತನ ಪ್ರಧಾನಿಯಾಗಿ 73 ವರ್ಷದ ರಾನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಐದು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ವಿಕ್ರಮಸಿಂಘೆ ಅವರಿಗೆ ಅಧ್ಯಕ್ಷ ಗೊಟಬಯ ರಾಜಪಕ್ಸ ಪ್ರಮಾಣ ವಚನ ಬೋಧಿಸಿದ್ದಾರೆ. ಶ್ರೀಲಂಕಾ ಪೊದುಜನ ಪೆರಮುನಾ (ಎಸ್‌ಎಲ್‌ಪಿಪಿ) ಸಂಸದರ ಬೆಂಬಲವನ್ನು ಪಡೆದುಕೊಂಡ ನಂತರ ವಿಕ್ರಮಸಿಂಘೆ ಅವರು ಪ್ರಧಾನಿ ಹುದ್ದೆ ಅಲಂಕರಿಸಿದ್ದಾರೆ.

ಶ್ರೀಲಂಕಾದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟು ನಿವಾರಿಸುವ ನಿಟ್ಟಿನಲ್ಲಿ ಈ ವಾರವೇ ಹೊಸ ಸಂಪುಟ ರಚನೆ ಮಾಡಿ, ಹೊಸ ಪ್ರಧಾನಿ ನೇಮಕ ಮಾಡುವುದಾಗಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಭರವಸೆ ನೀಡಿದ್ದರು.

ಕಳೆದ ಕೆಲ ತಿಂಗಳಿಂದ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿ ತುರ್ತು ಪರಿಸ್ಥಿತಿ ಹೇರಿದ ಮಧ್ಯೆಯೇ ಮಹಿಂದಾ ರಾಜಪಕ್ಸೆ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.