ಕೊಲಂಬೊ : ಶ್ರೀಲಂಕಾದ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪ್ರಮಾಣ ಬೋಧಿಸಿದರು.
ತೀವ್ರ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ನಿನ್ನೆ ಅಧ್ಯಕ್ಷೀಯ ಚುನಾವಣೆಯಲ್ಲಿ 134 ಮತಗಳನ್ನು ಪಡೆಯುವ ಮೂಲಕ ಬಹುಮತದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ವಿಕ್ರಮಸಿಂಘೆ, ಶ್ರೀಲಂಕಾವನ್ನು ಈ ಭೀಕರ ಬಿಕ್ಕಟ್ಟಿನಿಂದ ಪಾರು ಮಾಡಲು ಎಲ್ಲಾ ಪಕ್ಷಗಳೊಂದಿಗೆ ಕೆಲಸ ಮಾಡುವುದಾಗಿ ಪ್ರತಿಪಕ್ಷಗಳಿಗೆ ಭರವಸೆ ನೀಡಿದರು.










