ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಶ್ರೀ ರಾಮ ಜನ್ಮಭೂಮಿಗೆ 25 ಲಕ್ಷ ರೂ. ದೇಣಿಗೆ…

204
firstsuddi

ದಕ್ಷಿಣ ಕನ್ನಡ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಿದ್ದು, ರಾಮ ಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ನಿಧಿ ಸಮರ್ಪಣಾ ಅಭಿಯಾನ ನಡೆಸಲಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರಾಮ ಜನ್ಮಭೂಮಿಗೆ 25 ಲಕ್ಷ ರೂ ದೇಣಿಗೆ ನೀಡಲಾಗಿದೆ. ಈ ಕುರಿತು ಶ್ರೀ ಧರ್ಮಸ್ಥಳ ಕ್ಷೇತ್ರದ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟಪಡಿಸಲಾಗಿದ್ದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಲಕ್ಷ ರೂ ನೀಡುವುದಾಗಿ ಪ್ರಕಟಿಸಿದೆ. ರಾಮ ಮಂದಿರವು ಶತಮಾನದ ವಿಸ್ಮಯವಾಗಿ ಅದ್ಭುತ ಮಂದಿರವಾಗಿ ಮೂಡಿಬರಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿ. ವೀರೇಂದ್ರ ಹೆಗ್ಗಡೆ ಅವರು ಉಲ್ಲೇಖಿಸಿದ್ದಾರೆ.