ಸಂಕ್ರಾಂತಿ, ವೈಕುಂಠ ಏಕಾದಶಿ ಆಚರಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ…

77
firstsuddi

ಬೆಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಕ್ರಾಂತಿ ಮತ್ತು ವೈಕುಂಠ ಏಕಾದಶಿ ಆಚರಣೆಗೆ ಸಂಬಂಧಪಟ್ಟಂತೆ ಸರ್ಕಾರದಿಂದ ಸರ್ಕಾರದಿಂದ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

ಇದೇ ತಿಂಗಳ 13ರಂದು ವೈಕುಂಠ ಏಕಾದಶಿ ಹಾಗೂ ಜ. 15 ರಂದು ಮಕರ ಸಂಕ್ರಾಂತಿ ಹಬ್ಬಗಳ ಆಚರಣೆ ನಡೆಯಲಿದೆ. ಈ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ.

1. ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪುಯುಕ್ತ ದೇವಾಲಯದ ಶಾಸ್ತ್ರ, ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಲು ಅನುಮತಿ.

2. ವೈಕುಂಠ ಏಕಾದಶಿ ದಿನದಂದು ಈಗಾಗಲೇ ನಿಗದಿಪಡಿಸಿರುವಂತೆ ಪೂರ್ಣ ಪ್ರಮಾಣದ ಕೋವಿಡ್-19 ಲಸಿಕೆ ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸತಕ್ಕದ್ದು, ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿರುವುದಿಲ್ಲ. ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳು ಇತ್ಯಾದಿಗಳನ್ನು ಆಯೋಜಿಸುವಂತಿಲ್ಲ.

3. ಬೆಂಗಳೂರು ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳೀಯ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ಇನ್ನೂ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲು ಕ್ರಮವಹಿಸತಕ್ಕದ್ದು.