ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಕಲ್ಲೆಸೆತ…

77
firstsuddi

ಬೆಳಗಾವಿ: ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಕಿಡಿಗೇಡಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಕಲ್ಲೆಸೆದು ಪರಾರಿಯಾಗಿದ್ದಾರೆ. ಕಿಡಿಗೇಡಿಗಳು ಎಸೆದ ಕಲ್ಲಿನಿಂದ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ.

ವಿಷಯ ತಿಳಿದು ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿದ್ದಾರೆ. ಹಿರೇಬಾಗೇವಾಡಿ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನೆಗೆ ಕಾರಣರಾದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕೆಂಬ ಒತ್ತಡ ನಿರ್ಮಾಣವಾಗಿದೆ.