ಮುಂಬೈ : ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜೀವ ಬೆದರಿಕೆ ಸಂದೇಶ ಬಂದಿದೆ.
ಸಂಜಯ್ ರಾವತ್ ಅವರಿಗೆ ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಬಳಸಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಸಂಜಯ್ ರಾವತ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನನಗೆ ಈ ಹಿಂದೆ ಸಹ ಬೆದರಿಕೆ ಬಂದಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೆ. ಆದರೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪ್ರತಿಪಕ್ಷ ನಾಯಕರ ಭದ್ರತೆಯ ಬಗ್ಗೆ ರಾಜ್ಯ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.
ಈ ಹಿಂದೆ ಸಲ್ಮಾನ್ ಖಾನ್ ಗೂ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಕರೆ ಬಂದಿತ್ತು. ಬೆದರಿಕೆ ಕರೆಯಲ್ಲಿ ಸಿಧು ಮೂಸೆವಾಲಾನ ಸ್ಥಿತಿಯೇ ನಿಮಗೆ ಆಗಲಿದೆ ಎಂದು ಹೇಳಲಾಗಿತ್ತು.










