ಸಂಜಯ್ ರಾವತ್‍ಗೆ 14 ದಿನಗಳ ನ್ಯಾಯಾಂಗ ಬಂಧನ…

70
firstsuddi

ಮುಂಬೈ: ಪತ್ರಾ ಚಾವ್ಲ್ ಭೂಹಗರಣ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ 14 ದಿನಗಳ(ಆಗಸ್ಟ್ 22) ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಗೋರೆಗಾಂವ್ ನ ಉಪನಗರದಲ್ಲಿರುವ ಪತ್ರಾ ಚಾವ್ಲ್ ಮರುಅಭಿವೃದ್ಧಿಯಲ್ಲಿ ನಡೆದಿರುವ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ರಾವುತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಇಂದು ಇಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರ ಮುಂದೆ ಹಾಜರುಪಡಿಸಲಾಯಿತು.

ಮನೆಯ ಆಹಾರ ಮತ್ತು ಔಷಧಿಗಳಿಗಾಗಿ ರಾವುತ್ ಮಾಡಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಮನೆಯಿಂದಲೇ ಹಾಸಿಗೆ ಒದಗಿಸುವಂತೆ ಕೇಳಿದ್ದ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದೆ.