ಸಂತೋಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ : ಬಿಎಸ್‍ವೈ.

62
firstsuddi

ಬೆಳಗಾವಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ನನಗೆ ಏನೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನಾನು ಸಂತೋಷ್ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ. ತನಿಖೆ ಮಾಡಿಸುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದಾರೆ. ತನಿಖೆಯ ವರದಿ ಬಂದ ಬಳಿಕ ವಾಸ್ತವಿಕ ಸತ್ಯ ಹೊರಬರಲಿದೆ. ಚುನಾವಣೆ ಇನ್ನೂ ಒಂದು ವರ್ಷ ಇದೆ. ಹೀಗಾಗಿ ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದು ಇದೇ ವೇಳೆ ಹೇಳಿದರು.

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ಪರ್ಸೆಂಟ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.