ರಾಯಚೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಅವರ ಆರೋಗ್ಯ ಈಗಾ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನ ಎರಡು ದಿನಗಳಲ್ಲಿ ಸರಿ ಹೋಗಬಹುದು. ಈ ಘಟನೆ ಕುರಿತು ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದರು.
ಇದೇ ವೇಳೆ ಎನ್.ಆರ್. ಸಂತೋಷ್ ಅವರು ಎಂಎಲ್‍ಸಿ ಹಾಗೂ ಮಿನಿಸ್ಟರ್ ವೀಡಿಯೋ ವಿಚಾರದಲ್ಲಿ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಅವರ ಹೇಳೀಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ಡಿ.ಕೆ. ಶಿವಕುಮಾರ್ ಅವರ ಬಳಿ ಯಾವುದೇ ವೀಡಿಯೋಗಳಿದ್ದರೆ ಅದನ್ನು ನಮಗೆ ನೀಡಲಿ. ಅವರು ನೀಡುವ ವೀಡಿಯೋಗಳನ್ನೂ ಕೂಡಾ ತನಿಖೆಗೆ ಒಳಪಡಿಸುತ್ತೇವೆ ಎಂದರು.










