ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್.. ಪ್ರಾಥಮಿಕ ತನಿಖಾ ವರದಿ ಬರುವವರೆಗೂ ಯಾವುದೇ ಕ್ರಮವಿಲ್ಲ ಎಂದ ಬೊಮ್ಮಾಯಿ.

52
firstsuddi

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಾಥಮಿಕ ಹಂತದ ವರದಿ ಬರುವವರೆಗೂ ಯಾವುದೇ ಕ್ರಮಕ್ಕೆ ಮುಂದಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ಆಗುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆ ಬಗ್ಗೆ ನಿರ್ಣಯ ಮಾಡುತ್ತೇವೆ. ಈಶ್ವರಪ್ಪ ವಿಷಯದಲ್ಲಿ ಹೈಕಮಾಂಡ್ ನ ಮಧ್ಯಪ್ರವೇಶ ಏನು ಇಲ್ಲ. ಈಶ್ವರಪ್ಪ ರಾಜೀನಾಮೆ ಪಡೆಯುವ ವಿಚಾರ ಕುರಿತು ಪ್ರಾಥಮಿಕ ತನಿಖೆ ಆಗುವವರೆಗೂ ಯಾವುದೇ ರೀತಿಯ ಕ್ರಮ ಇಲ್ಲ ಎಂದರು.

ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಆದರೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಹಲವು ಕೊಲೆಗಳಾದವು. ಇದರಿಂದ ಆಗ ಅರಾಜಕತೆ ಉಂಟಾಗಿತ್ತು. ಹಾಗಾಗಿ ಜನ ಚುನಾವಣೆಯಲ್ಲಿ ಅವರನ್ನು ತಿರಸ್ಕರಿಸಿದ್ದರು. ಕಾಂಗ್ರೆಸ್ ನವರಿಗೆ ಪ್ರತಿಭಟನೆ ನಡೆಸುವ ಯಾವುದೇ ನೈತಿಕ ಹಕ್ಕಿಲ್ಲ. ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣದ ಸಂಪೂರ್ಣ ತನಿಖೆ ಆಗುತ್ತದೆ, ಸತ್ಯ ಹೊರಬರುತ್ತದೆ ಎಂದು ಹೇಳಿದರು.