ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗಿಲ್ಲ : ಸಿಎಂ ಬೊಮ್ಮಾಯಿ.

55
firstsuddi

ನವದೆಹಲಿ : ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದ್ದೆ. ಅವರು ತುರ್ತು ಕೆಲಸದ ಮೇಲೆ ಬೇರೆ ಕಡೆ ಹೋಗಿದ್ದರಿಂದ ಭೇಟಿ ಮಾಡಲು ಆಗಲಿಲ್ಲ. ಆದರೆ ಫೋನ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಸಂಪುಟದ ಕುರಿತು ಯಾವುದೇ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.

ಇಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆ ಮಾತನಾಡಿದ್ದೇನೆ. ಕೋರ್ ಕಮಿಟಿ ಚರ್ಚೆಯ ವಿಚಾರಗಳು ಮತ್ತು ಪರಿಷತ್ ಹಾಗೂ ರಾಜ್ಯಸಭೆಯ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯ ಕುರಿತು ಚರ್ಚೆ ನಡೆಸಿದ್ದೇವೆ. ಚರ್ಚೆ ವೇಳೆ ಕೋರ್ ಕಮಿಟಿ ಪಟ್ಟಿ ನೀಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ ಎಂದು ತಿಳಿಸಿದರು.