ಸಂಸತ್ತಿನಲ್ಲಿ ಕೃಷಿ ಕಾನೂನು ಹಿಂಪಡೆಯುವವರೆಗೂ ಪ್ರತಿಭಟನೆ : ರಾಕೇಶ್ ಟಿಕಾಯಿತ್.

72
firstsuddi

ನವದೆಹಲಿ : ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಹಿಂಪಡೆಯುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯಿತ್ ತಿಳಿಸಿದ್ದಾರೆ.

ರೈತರ ಆಂದೋಲನ ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್ಪಿ ಜೊತೆಗೆ ಸರ್ಕಾರವು ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ಟ್ವೀಟ್​  ಮಾಡಿದ್ದಾರೆ.

ಮಹಾರಾಷ್ಟ್ರ ಪಾಲ್ಘರ್ ಜಿಲ್ಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಟಿಕಾಯತ್, ಕೃಷಿ ಮಸೂದೆಯನ್ನು ಸಂಸತ್ತಿನಲ್ಲಿ ಪಾಸ್ ಮಾಡಲಾಗಿತ್ತು. ಇದೀಗ ಸಂಸತ್ನಲ್ಲಿ ಮತ್ತೆ ಕೃಷಿ ಮಸೂದೆ ಹಿಂಪಡೆಯುವ ಬಗ್ಗೆ ಬಿಲ್ ಪಾಸ್ ಆದ ಬಳಿಕ ನಾವು ಪ್ರತಿಭಟನಾ ಸ್ಥಳದಿಂದ ತೆರಳುತ್ತೇವೆ ಎಂದು ಹೇಳಿದ್ದಾರೆ.

ಕೃಷಿ ಮಸೂದೆ ಹಿಂಪಡೆದ ಬಗ್ಗೆ ಮಾಹಿತಿ ಸಿಕ್ಕಂತೆ ನಾನು ನಮ್ಮ ರೈತ ಹೋರಾಟದಲ್ಲಿರುವ ರೈತರೊಂದಿಗೆ ಮಾತುಕತೆ ನಡೆಸುತ್ತೇನೆ ಆ ಬಳಿಕ ಅವರ ಸೂಚನೆಯ ಮೇಲೆ ನಮ್ಮ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.