ನವದೆಹಲಿ : ಇಂದು ಮೊದಲ ದಿನದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, 17 ಮಂದಿ ಸಂಸದರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸಂಸತ್ ಅಧಿವೇಶನಕ್ಕೂ ಮುನ್ನ ನಿನ್ನೆ ಎಲ್ಲಾ ಸಂಸದರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಗಡೆ ಅವರು ಸೇರಿದಂತೆ ಬಿಜೆಪಿಯ 12 ಸಂಸದರು, ವೈಎಸ್ಆರ್ ಕಾಂಗ್ರೆಸ್ನ 2, ಶಿವಸೇನೆ, ಡಿಎಂಕೆ ಹಾಗೂ ಆರ್ಎಲ್ಟಿ ಪಕ್ಷದ ಒಬ್ಬರು ಸಂಸದರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಈ ಪೈಕಿ ಕೊರೋನಾಗೆ ತುತ್ತಾಗಿರುವ ಬಿಜೆಪಿಯ ಸಂಸದ ಸುಕಾಂತ್ ಮಜೂಂದಾರ್ ತಮಗೆ ಕೊರೋನಾ ಪಾಸಿಟಿವ್ ಬಂದಿರುವುದನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇನ್ನು ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಮೀನಾಕ್ಷಿ ಲೇಕಿಗೂ ಕೊರೋನಾ ವಕ್ಕರಿಸಿದೆ. ಇದಕ್ಕೂ ಮುನ್ನ ಗೃಹ ಸಚಿವ ಅಮಿತಾ ಶಾ ಸೇರಿದಂತೆ ಏಳು ಕೇಂದ್ರ ಸಚಿವರು ಮತ್ತು 25 ಸಂಸದರು ಕೊರೋನಾಗೆ ತುತ್ತಾಗಿದ್ದರು.










