ಸಕಲ ಪೂಜಾ ವಿಧಿ-ವಿಧಾನಗಳೊಂದಿಗೆ ಹಾಸನಾಂಬೆ ದೇವಿಯ ಗರ್ಭಗುಡಿ ಅದ್ದೂರಿಯಾಗಿ ಓಪನ್.

35

ಹಾಸನ: ಒಂದು ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ. ಸಕಲ, ಪೂಜಾ ವಿಧಿ-ವಿಧಾನಗಳೊಂದಿಗೆ, ಮಂಗಳವಾದ್ಯಗಳೊಂದಿಗೆ, ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಹಾಸನಾಂಬ ದೇವಿಯ ಬಾಗಿಲನ್ನು ಅದ್ದೂರಿಯಾಗಿ ತೆರೆಯಲಾಯಿತು.
ಎರಡು ಕಡೆಯ ಪೂಜೆಗಾಗಿ ಪೂಜಾ ಸಾಮಾಗ್ರಿ, ಒಡವೆ, ದೇವಿಯ ಅಲಂಕಾರ ಸಾಮಾಗ್ರಿಗಳೊಂದಿಗೆ, ದೇಗುಲಕ್ಕೆ ಪ್ರವೇಶ ಮಾಡಲಾಯಿತು. ಹಾಸನಾಮಬ ದೇವಿಯ ಗರ್ಭಗುಡಿ ಬಾಗಿಲು ತೆರೆಯುವ ಮೊದಲು ಗರ್ಭಗುಡಿ ಬಾಗಿಲಿಗೆ ಪೂಜೆ ಮಾಡಲಾಯಿತು. ಇಮದಿನಿಂದ ಭಕ್ತರಿಗೆ 9 ದಿನಗಳ ವರೆಗೆ ದೇವಿಯ ದರ್ಶನ ಪಡೆಯಲು ಅವಕಾಶವಿರುತ್ತದೆ. ಈ ವರ್ಷ ದಿನದ 24 ಗಂಟೆಯೂ ಹಾಸನಾಂಬ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತರ ದರ್ಶನಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ಮಳೆ-ಬಿಸಿಲಿನಿಂದ ಭಕ್ತರು ಆಶ್ರಯ ಪಡೆಯಲು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ. ಹಾಗೂ ಭಕ್ತಾದಿಗಳಿಗೆ ಆನ್‍ಲೈನ್ ಬುಕ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇಂದಿನಿಂದ ನವೆಂಬರ್ 3 ರವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಜರುಗಲಿದ್ದು ಮೊದಲ ಹಾಗೂ ಕೊನೆಯ ದಿನ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದ ಒಂಭತ್ತು ದಿನ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುವ ಕಾರಣದಿಂದ ಹಾಸನಾಂಬ ದೇಗುಲದ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೂಬಸ್ತ್ ಸಹ ಅಳವಡಿಸಲಾಗಿದೆ.