ಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಚಿವರ ಪುತ್ರ ತಾನೇ ಮುಂದೆ ನಿಂತು ಚಾಲನೆ ನೀಡಿರುವ ವಿಡಿಯೋ ವೈರಲ್ ಆಗಿದೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಶಾಸಕ ಹಾಗೂ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಪುತ್ರ ತಮ್ಮ ತಂದೆಯ ಅನುಪಸ್ಥಿತಿಯಲ್ಲಿ ಸರ್ಕಾರದ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಪಿರಿಯಾಪಟ್ಟಣದಲ್ಲಿ ನಡೆದಿದ್ದ ಶಕ್ತಿ ಯೋಜನೆ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ನಿತಿನ್ ವೆಂಕಟೇಶ್ ಕಾಣಿಸಿಕೊಂಡಿದ್ದರು. ತಂದೆ ಕೆ. ವೆಂಕಟೇಶ್ ಅನುಪಸ್ಥಿತಿಯಲ್ಲಿ ಪುತ್ರ ನಿತಿನ್ ವೆಂಕಟೇಶ್ ಚಾಲನೆ ನೀಡಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.










