ಸಚಿವ ಆನಂದ್ ಸಿಂಗ್ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು…

46
firstsuddi

ವಿಜಯನಗರ : ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸೇರಿದಂತೆ ನಾಲ್ವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.

ಡಿ. ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಐಪಿಸಿ ಸೇಕ್ಷನ್ 504, 506 r/w 34 IPC, 3(2)(Va) SC/ST ಕಾಯ್ದೆ ಅಡಿ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ ಎಂದು ಸಚಿವ ಆನಂದ್ ಸಿಂಗ್ ಅವರು ಜೀವ ಬೆದರಿಕೆ ಒಡ್ಡಿದ್ದಾರೆ ಆರೋಪಿಸಿ ಪೋಲಪ್ಪ ಅವರು ಕುಟುಂಬ ಸಮೇತ ಹೊಸಪೇಟೆಯ ಎಸ್ ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಸ್ಥಳದಲ್ಲೇ ಇದ್ದ ಪೊಲೀಸರು ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಕುಟುಂಬದ ಸದಸ್ಯರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.