ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್…

129
firstsuddi

ಬೆಂಗಳೂರು : ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ಕುರಿತು ಟ್ವೀಟ್ ಮಾಡಿ ತಿಳಿಸಿರುವ ಶಿವರಾಮ್ ಹೆಬ್ಬಾರ್ ಅವರು, ಇಂದು ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಎಂದು ಬಂದಿದೆ. ಯಾವುದೇ ಹಿಚ್ಚಿನ ರೋಗಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ತೆಗೆದುಕೊಳ್ಳಲಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ,ಹಾರೈಕೆಯಿಂದ ಶೀಘ್ರ ಗುಣಮುಖವಾಗಿ ವಿಶ್ವಾಸವಿದೆ ಎಂದು ಟ್ವೀಟ್ ಮಾಡಿದ್ದಾರೆ.