ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೈಕೆಲ್ ಲೋಬೋ.

90
firstsuddi

ಪಣಜಿ : ಗೋವಾ ವಿಧಾನಸಭೆ ಚುನಾವಣೆಗೆ ಫೆಬ್ರವರಿ 14ರಂದು ಮತದಾನ ನಡೆಯಲಿದೆ. ಈ ಮಧ್ಯೆ ಗೋವಾದ ಸಚಿವ ಹಾಗೂ ಬಿಜೆಪಿ ಶಾಸಕ ಮೈಕೆಲ್ ಲೋಬೊ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಾಮಾನ್ಯ ಜನರ ಪಕ್ಷವಲ್ಲವಾಗಿ ಉಳಿದಿಲ್ಲ. ಇದರಿಂದಾಗಿ ನಾನು ಶಾಸಕ ಹಾಗೂ ಸಚಿವ ಸ್ಥಾನವೆರಡಕ್ಕೂ ರಾಜೀನಾಮೆ ನೀಡಿದ್ದೇನೆ. ಯಾವ ಪಕ್ಷಕ್ಕೆ ಸೇರಬೇಕೆನ್ನುವುದನ್ನು ನಾನು ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದರು, ಕಾಂಗ್ರೆಸ್ ಗೆ ಸೇರುತ್ತಾರೋ ಅಥವಾ ಇತರೆ ಪಕ್ಷಕ್ಕೆ ಸೇರುತ್ತಾರೋ ಎನ್ನುವುದರ ಕುರಿತು ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ.