ಸತೀಶ್ ಜಾರಕಿಹೊಳಿ ಹೆಸರು ದುರ್ಬಳಕೆ ಯತ್ನ – ದೂರು ದಾಖಲು…

51
firstsuddi

ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿಗೆ ಕಳಂಕ ತರುವ ಯತ್ನ ನಡೆದಿದ್ದು, ಖಾಸಗಿ ವೆಬ್‌ಸೈಟ್‌ಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬರುತ್ತಿದೆ. ಈ ಕುರಿತಂತೆ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಅವರು ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ದೂರಿನಲ್ಲಿ ಸತೀಶ್ ಅವರ ಹೆಸರಿಗೆ ಕಳಂಕ ತರಲು ಪೋರ್ನ್ ವೆಬ್ ಸೈಟ್ ನಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರಿನಲ್ಲಿ ಅಶ್ಲೀಲ ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಾರೆ. ಸತೀಶ್ ಜಾರಕಿಹೊಳಿ ಹೆಸರು ದುರ್ಬಳಕೆ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸತೀಶ್ ಜಾರಕಿಹೊಳಿ ಅಭಿಮಾನಿ ಒತ್ತಾಯಿಸಿದ್ದಾರೆ.