ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ : ದೇಶದಾದ್ಯಂತ 33 ಸ್ಥಳಗಳಲ್ಲಿ ಸಿಬಿಐ ದಾಳಿ…

58
firstsuddi

ನವದೆಹಲಿ : ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಮತ್ತು ದೆಹಲಿ ಸೇರಿದಂತೆ ದೇಶದಾದ್ಯಂತ ಸುಮಾರು 33 ಸ್ಥಳಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ದಾಳಿ ನಡೆಸುತ್ತಿದೆ.

ಜಮ್ಮು-ಕಾಶ್ಮೀರದ ಎಸ್ ಎಸ್ ಬಿ ಮಾಜಿ ಅಧ್ಯಕ್ಷ ಖಾಲಿದ್ ಜಹಾಂಗೀರ್, ಜಮ್ಮು-ಕಾಶ್ಮೀರ ಸೇವಾ ಆಯೋಗದ ಮಾಜಿ ಪರೀಕ್ಷಾ ನಿಯಂತ್ರಕ ಅಶೋಕ್ ಕುಮಾರ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉಳಿದಂತೆ ಹರಿಯಾಣದ ಕರ್ನಾಲ್, ಮಹೇಂದರ್ ಗಢ, ರೇವಾರಿಯಲ್ಲಿ ದಾಳಿ ನಡೆಸಲಾಗಿದ್ದು, ಗುಜರಾತ್ ನ ಗಾಂಧಿ ನಗರ, ನವದೆಹಲಿ, ಉತ್ತರಪ್ರದೇಶದ ಗಾಜಿಯಾಬಾದ್ ಹಾಗೂ ಬೆಂಗಳೂರಿನಲ್ಲೂ ಶೋಧಕಾರ್ಯ ನಡೆಸಲಾಗ್ತಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಈ ವರ್ಷದ ಆರಂಭದಲ್ಲಿ ಇನ್ಸ್ ಪೆಕ್ಟರ್ ನೇಮಕಾತಿ ನಡೆಸಲಾಗಿತ್ತು. ಅದರ ಫಲಿತಾಂಶ ಜೂನ್ 4ರಂದು ಬಹಿರಂಗಗೊಂಡಿತ್ತು. ಇದರಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದವು. ಹೀಗಾಗಿ, ಜಮ್ಮು – ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಯ್ಕೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆಗೆ ಆದೇಶಿಸಿದ್ದರು. ಬಳಿಕ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ. ಹೀಗಾಗಿ, ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.