ಕಾರವಾರ : ಸಮುದ್ರದಲ್ಲಿ ಈಜಲು ಹೋದ ಯುವಕ ನೀರುಪಾಲಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದ ಕಡಲ ತೀರದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ಸಮುದ್ರ ಪಾಲಾದ ಯುವಕ. ಪ್ರವಾಸಕ್ಕೆಂದು ಬೆಂಗಳೂರಿನಿಂದ ಗೋಕರ್ಣಕ್ಕೆ ಎಂಟು ಮಂದಿ ಬಂದಿದ್ದರು. ಸ್ಥಳೀಯ ಜನರ ಎಚ್ಚರಿಕೆ ನಡುವೆಯೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದರು. ಆದರೆ, ಅಲೆಯ ಅಬ್ಬರಕ್ಕೆ ಅರುಣ್ ತೇಲಿ ಹೋಗಿದ್ದು, ಸಮುದ್ರಕ್ಕೆ ಇಳಿದಿದ್ದ ಉಳಿದವರು ಈಜಿ ದಡ ಸೇರಿದ್ದಾರೆ. ಸಮುದ್ರ ಪಾಲಾದ ಅರುಣ ಲಕ್ಕಪ್ಪ ಪತ್ತೆಗಾಗಿ ಪೊಲೀಸರು ಹಾಗೂ ಲೈಫ್ ಗಾರ್ಡ್ ಗಳು ಶೋಧ ಕಾರ್ಯ ಮುಂದುವರೆಸಿದ್ದು ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










