ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಅಧ್ಯಕ್ಷ ಹೆಚ್. ವಿಶ್ವನಾಥ್ ಅವರ ವಿರುದ್ಧ ತಮ್ಮ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಅಧ್ಯಕ್ಷ ಹೆಚ್.ವಿಶ್ವನಾಥ್ ಅವರ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ನಾನು ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ, ಈಗ ವಿಶ್ವನಾಥ್ ಮುಂದೆ ಯಾರು ಈ ರೀತಿ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಾರೊ ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು. ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು.ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಟ್ವೀಟ್ ಮಾಡಿದ್ದಾರೆ.












