ಸರಣಿ ಹತ್ಯೆ : 177 ಕಾಶ್ಮೀರಿ ಪಂಡಿತ ಶಿಕ್ಷಕರ ವರ್ಗಾವಣೆ…

72
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಹತ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ನಿಯೋಜಿಸಲಾದ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಭಯೋತ್ಪಾದಕರ ಉದ್ದೇಶಿತ ದಾಳಿಯ ಹಿನ್ನೆಲೆ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯ ನಂತರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಘಟನೆಯಿಂದ ತಲ್ಲಣಗೊಂಡಿದ್ದ ಪಂಡಿತರು, ವರ್ಗಾವಣೆ ಮಾಡಿ ಇಲ್ಲದಿದ್ದರೆ, ಸಾಮೂಹಿಕ ವಲಸೆ ಹೋಗುವ ಬೆದರಿಕೆ ಹಾಕಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಭಟ್ ಹತ್ಯೆಯ ನಂತರ ಸುಮಾರು 6,000 ಸಿಬ್ಬಂದಿ ವರ್ಗಾವಣೆ ಕೋರಿ ಮನವಿ ಮಾಡಿದ್ದರು. ಆದರೆ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ನಿಯೋಜಿತ ದಾಳಿಗಳು ಹೆಚ್ಚಿದ ಹಿನ್ನೆಲೆ ಸರ್ಕಾರ ವರ್ಗಾವಣೆ ಮಾಡಲು ಆದೇಶಿಸಿದೆ.