ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಹೇಳಿದಕ್ಕೆ ಹಿರಿಯ ಸಬ್​-ಇನ್ಸ್​ಪೆಕ್ಟರ್ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ ಹೆಡ್ ಕಾನ್ಸ್​​ಟೇಬಲ್…

452
firstsuddi

ಉತ್ತರ ಪ್ರದೇಶ : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದ್ದು, ಈ ವೇಳೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಹೇಳಿದ ಹಿರಿಯ ಸಬ್​-ಇನ್ಸ್​ಪೆಕ್ಟರ್ ಮೇಲೆ ಹೆಡ್ ಕಾನ್ಸ್​​ಟೇಬಲ್ ಒಬ್ಬರು ಲಾಠಿಯಿಂದ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಹಲ್ಲೆ ನಡೆಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ಬಳಿಕ ಕೊಟ್ವಾಲಿ ಪೊಲೀಸ್ ಠಾಣೆಯ ಪೊಲೀಸರು ಹೆಡ್ ಕಾನ್ಸ್​​ಟೇಬಲ್ ರಾಮಶ್ರೇ ಅವರನ್ನು ಅಮಾನತುಗೊಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ಆರ್. ಕುಮಾರ್ ಅವರು ಲಾಕ್‍ಡೌನ್ ವೇಳೆ ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣ ಹಿರಿಯ ಸಬ್​-ಇನ್ಸ್​ಪೆಕ್ಟರ್ ರಮೇಶ್ ಚೌಹಾಣ್ ಅವರು ಹೆಡ್ ಕಾನ್ಸ್​​ಟೇಬಲ್ ರಾಮಶ್ರೇ ಅವರಿಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಹೆಡ್ ಕಾನ್ಸ್​​ಟೇಬಲ್ ರಮೇಶ್ ಚೌಹಾಣ್ ಅವರಿಗೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.