ಸರ್ಕಾರಿ ಆಂಬುಲೆನ್ಸ್ ಹಾಗೂ ಕಾರ್ ನಡುವೆ ಡಿಕ್ಕಿ, ಒಂದೇ ಕುಟುಂಬದ ಐವರು ಸಾವು…

156
firstsuddi

ಬೆಂಗಳೂರು : ಸರ್ಕಾರಿ ಆಂಬುಲೆನ್ಸ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಚೆನ್ನೈಯಿಂದ ತಮ್ಮ ಸಂಬಂಧಿಕರ ಮನೆಗೆ ತೆರಳುವಾಗ ತಡರಾತ್ರಿ 12:30 ರ ಸುಮಾರಿಗೆ ಘಟನೆ ಸಂಭವಿಸಿದ್ದು, ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ. ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.