ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ನಿರ್ಧಾರದಿಂದ ಹಿಂದೆ ಸರಿಯಬೇಕು : ಎಚ್.ವಿಶ್ವನಾಥ್ ಆಗ್ರಹ…

87
firstsuddi

ಮೈಸೂರು : ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಇಂತಹ ಕೋವಿಡ್ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬೇಕೆ.? ಎಂದು ಪ್ರಶ್ನಿಸಿದ್ದಾರೆ. ಸಾವಿನ ಕೂಪಕ್ಕೆ ಮಕ್ಕಳನ್ನು ತಳ್ಳುವ ಕೆಲಸ ಇದು. ಯಾರದ್ದೋ ಮಾತು ಕೇಳಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾಡಲು ಮುಂದಾಗಿರುವುದು ಸರಿಯಲ್ಲ. ಈ ಸರ್ಕಾರದಲ್ಲಿ ಅಕ್ಷರ, ಆರೋಗ್ಯ ಎರಡು ಕೆಟ್ಟು ಹೋಗುತ್ತಿದೆ. ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಕ್ಕಳ ಜೀವದ ಜೊತೆ ಆಟವಾಡಬಾರದು, ಈಗಾಗಲೇ ಕೋವಿಡ್ 3ನೇ ಅಲೆ ಹಾಗೂ ಡೆಲ್ಟಾ ಪ್ಲಸ್ ವ್ಯಾಪಕವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಪಾಠಗಳು ನಡೆದಿಲ್ಲ. ಇದು ಮೂರ್ಖತನ ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾಡಬೇಕು ಎಂಬ ತೀರ್ಮಾನ ಹಿಂಪಡೆಯಿರಿ ಎಂದು ಆಗ್ರಹಿಸಿದರು.